ಸುದ್ದಿ ಕನ್ನಡ ವಾರ್ತೆ
ಕಾರವಾರ; ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹಾಗೂ ಜಿಲ್ಲಾ ದಂಡಾಧಿಕಾರಿಯಾಗಿ ಬೋಯರ್ ಹರ್ಷಲ್ ನಾರಾಯಣರಾವ್ ರವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
2016ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಇವರು ಉತ್ತರ ಕನ್ನಡ ಜಿಲ್ಲೆಯ ಹೊಣೆಗಾರಿಕೆಗೆ ನಿಯೋಜಿಸಲಾಗಿದೆ.
ಇವರು ಈ ಹಿಂದೆ ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಹಾಗೂ ಅಟಲ್ ಜಿ ಜನಸ್ನೇಹಿ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಲಕ್ಷ್ಮಿ ಪ್ರಿಯ ರವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಇದೀಗ ನೂತನ ಜಿಲ್ಲಾಧಿಕಾರಿಗಳು ನಿಯತ್ತಿಕೊಂಡಿದ್ದಾರೆ.
