ಸುದ್ದಿ ಕನ್ನಡ ವಾರ್ತೆ
ಜೋಯಿಡಾ: 12 :ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗ್ರೇಡ್–2 ತಹಶೀಲ್ದಾರರಾಗಿ ಸೇವೆ ಸಲ್ಲಿಸಿರುವ ಪ್ರಕಾಶ್ ಎಂ. ಕಲ್ಲೋಳಿ ಅವರು, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ನೂತನ ಗ್ರೇಡ್–1 ತಹಶೀಲ್ದಾರರಾಗಿ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.
ಇವರು ಈ ಹಿಂದೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಂದಾಯ ಇಲಾಖೆಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಇದೀಗ ಗ್ರೇಡ್–1 ತಹಶೀಲ್ದಾರರಾಗಿ ಪದೋನ್ನತಿ ಹೊಂದಿ ಜೋಯಿಡಾ ತಾಲೂಕಿನಲ್ಲಿ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಇವರ ಮುಂದಿನ ಆಡಳಿತಾತ್ಮಕ ಸೇವಾ ಪಯಣ ಸುಗಮವಾಗಿರಲಿ ಹಾಗೂ ಜನಪರ ಆಡಳಿತದ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಕೆ. ಕಳೆದ ಒಂದು ವಾರ ದಿಂದ ದಾಂಡೇಲಿಯ ತಹಸೀಲ್ದಾರ್ ಶೈಲೇಶ ಪರಮಾನಂದ ಅವರು ಪ್ರಭಾರಿ ತಹಸೀಲ್ದಾರ್ ಆಗಿ ದಕ್ಷತೆ ಯಿಂದ ಕಾರ್ಯನಿರ್ವಹಿಸಿದ್ದಾರೆ.
