ಸುದ್ದಿ ಕನ್ನಡ ವಾರ್ತೆ
Goa:ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕ ಉತ್ತರ ಮತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳ ಸರ್ವಸಾಧಾರಣ ಸಭೆ ಮಡಗಾo ವ ನಲ್ಲಿ ಭಾನುವಾರ ನಡೆಯಿತು.
ಈ ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಅಧ್ಯಕ್ಷ ಸಿದ್ದಣ್ಣ ಮೇಟಿ ವಹಿಸಿದ್ದರು.
ಡಿಸೆಂಬರ್ ತಿಂಗಳಿನಲ್ಲಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೋವಾ ರಾಜ್ಯದಿಂದ ಪದಾಧಿಕಾರಿಗಳು ಪಾಲ್ಗೊಳ್ಳುವ ಕುರಿತು ಚರ್ಚಿಸಲಾಯಿತು. ಜನವರಿ ಐದರಂದು ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕ ದಕ್ಷಿಣ ಗೋವಾ ಜಿಲ್ಲಾ ಹಾಗೂ ಸಾಲಸೆಟ ತಾಲೂಕ ಘಟಕದ ಸಯುಕ್ತ ಆಶ್ರಯದಲ್ಲಿ ಗೋವಾದ ಮಡಗಾವ್ ನಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಅಧ್ಯಕ್ಷ ಸಿದ್ದಣ್ಣ ಮೇಟಿ ರವರ ಮುಖೇನ ವಿವಿಧ ವಿಷಯಗಳು ಚರ್ಚೆಗೆ ಬಂದವು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕ ಜಿಲ್ಲಾ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.