ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ನಂದಿಗದ್ದೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಅವುರ್ಲಿ ಇವರ ಸಂಯುಕ್ತ ಆಶ್ರಯದಲ್ಲಿ ನಂದಿಗದ್ದೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ದಿನಾಂಕ:23-11-2026, ಸೋಮವಾರ ಬೆಳಿಗ್ಗೆ 09-30 ಗಂಟೆಗೆ ಸ್ಥಳ:ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮಗಳ ವಿವರ:1.ಸ್ವಾಗತ ಗೀತೆ, 2.ಸ್ವಾಗತ ಭಾಷಣ, 3.ಉದ್ಘಾಟನೆ,4. ಉದ್ಘಾಟಕರ ಹಿತನುಡಿ, 5.ಅತಿಥಿಗಳ ಹಿತನುಡಿ, 6.ಅಧ್ಯಕ್ಷರ ಹಿತನುಡಿ,7.ವಂದನಾರ್ಪಣೆ, 8.ಸ್ಪರ್ಧೆಗಳ ಆರಂಭ, 9.ಬಹುಮಾನ ವಿತರಣೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು,ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು, ಪಾಲಕ-ಪೋಷಕರು,ಹಳೆಯ ವಿದ್ಯಾರ್ಥಿಗಳು,ಊರಿನ ಗ್ರಾಮಸ್ಥರು ಸರ್ವರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.