ಸುದ್ದಿ ಕನ್ನಡ ವಾರ್ತೆ
ಜೋಯಿಡಾ: ತಾಲೂಕಿನ ಖಾನಗಾಂವ ಗ್ರಾಮದಲ್ಲಿ ಹಲವು ವರ್ಷಗಳಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿದ್ದು, ಗ್ರಾಮದಲ್ಲಿ ಹೊಸ ಮೊಬೈಲ್ ನೆಟ್‌ವರ್ಕ್ ಟವರ್ ನಿರ್ಮಿಸುವಂತೆ ಆಗ್ರಹಿಸಿ ಕುಣಬಿ ಸಮಾಜದ ವತಿಯಿಂದ ಜೋಯಿಡಾ ತಹಶೀಲ್ದಾರ್ ಮೂಲಕ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

 

ಖಾನಗಾಂವ ಗ್ರಾಮದಲ್ಲಿ ಸಮರ್ಪಕ ಮೊಬೈಲ್ ನೆಟ್‌ವರ್ಕ್ ಸೌಲಭ್ಯವಿಲ್ಲದ ಕಾರಣ ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ದೂರವಾಣಿ ಕರೆ ಮಾಡಲು ಹಾಗೂ ಇಂಟರ್ನೆಟ್ ಬಳಸಲು ಗ್ರಾಮಸ್ಥರು ಸುಮಾರು 20 ನಿಮಿಷಗಳ ಕಾಲ ನಡೆದು ಗುಡ್ಡ ಪ್ರದೇಶಕ್ಕೆ ತೆರಳಬೇಕಾದ ಪರಿಸ್ಥಿತಿಯಿದೆ. ತುರ್ತು ಸಂದರ್ಭಗಳಲ್ಲಿಯೂ ಸಂಪರ್ಕ ಸಾಧಿಸಲು ಸಾಧ್ಯವಾಗದೇ ಗ್ರಾಮಸ್ಥರು ಸಮಸ್ಯೆ ಎದುರಿಸುತ್ತಿದ್ದಾರೆ.

ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಖಾನಗಾಂವ ಗ್ರಾಮದಲ್ಲಿ ಮೊಬೈಲ್ ನೆಟ್‌ವರ್ಕ್ ಟವರ್ ನಿರ್ಮಾಣ ಮಾಡಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ಉತ್ತಮ ಸಂಪರ್ಕ ಸೌಲಭ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕುಣಬಿ ಸಮಾಜದ ತಾಲೂಕು ಅಧ್ಯಕ್ಷ ಪ್ರೇಮಾನಂದ ವೇಳಿಪ, ಜಿಲ್ಲಾ ಅಧ್ಯಕ್ಷ ಸುಭಾಷ್ ಗಾವಡಾ, ಉಪಾಧ್ಯಕ್ಷ ಕೃಷ್ಣ ಮಿರಾಶಿ, ಕಾರ್ಯದರ್ಶಿ ದಯಾನಂದ ಕುಮಗಾಳಕರ,ಖಜಾಂಚಿ ದಿವಾಕರ ಕುಂಡಲಕರ ಪ್ರಮುಖರಾದ ಅಜಿತ ಮಿರಾಶಿ,ರಾಜೇಶ ಗಾವಡಾ ಸೇರಿದಂತೆ ಇನ್ನಿತರ ಸಮಾಜದ ಮುಖಂಡರು ಉಪಸ್ಥಿತರಿದ್ದರು.