ಸುದ್ದಿ ಕನ್ನಡ

ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ಜಗಲಬೇಟ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಜಗಲಬೇಟ ಇವರ ಸಂಯುಕ್ತ ಆಶ್ರಯದಲ್ಲಿ ಜಗಲಬೇಟ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ದಿನಾಂಕ:19-11-2026 ರ ಗುರುವಾರರಂದು ನಡೆದ ಅಭಿನಯ ಗೀತೆ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಜಗಲಬೇಟ ಶಾಲೆಯ ವಿದ್ಯಾರ್ಥಿನಿ ದಿತ್ಯಾ ರಾಠೋಡ ಅಭಿನಯ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ,ಸಹ ಶಿಕ್ಷಕ ವೃಂದದವರು,ಸಮೂಹ ಸಂಪನ್ಮೂಲ ವ್ಯಕ್ತಿಗಳು,ಶಾಲಾ ಎಸ್ ಡಿ ಎಂ ಸಿ ಪದಾಧಿಕಾರಿಗಳು, ಕ್ಲಸ್ಟರಿನ ಮುಖ್ಯ ಶಿಕ್ಷಕ,ಸಹ ಶಿಕ್ಷಕ ವೃಂದದವರು,ಪಾಲಕರು-ಶಿಕ್ಷಕ ದಂಪತಿಗಳಾದ ಅನಿಲ ರಾಠೋಡ ಹಾಗೂ ಸ್ಮಿತಾ ಜಾಧವ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.