ಸುದ್ದಿ ಕನ್ನಡ

ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ನಂದಿಗದ್ದೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಅವುರ್ಲಿ ಇವರ ಸಂಯುಕ್ತ ಆಶ್ರಯದಲ್ಲಿ ನಂದಿಗದ್ದೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ದಿನಾಂಕ:23-11-2026 ರ ಸೋಮವಾರಂದು ನಡೆದ ಪ್ರತಿಭಾ ಕಾರಂಜಿಯ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಅವುರ್ಲಿ ಶಾಲೆಯ ವಿದ್ಯಾರ್ಥಿ ಸುದರ್ಶನ ಸೋಮಣ್ಣ ವೇಳಿಪ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

 

ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಬೀರಪ್ಪ ಉರ್ಮಿ,ಅತಿಥಿ ಶಿಕ್ಷಕರಾದ ರತ್ನಾಕರ ತೆಲೋಲಿಕರ,ಸಮೂಹ ಸಂಪನ್ಮೂಲ ವ್ಯಕ್ತಿಗಳು,ಶಾಲಾ ಎಸ್ ಡಿ ಎಂ ಸಿ ಪದಾಧಿಕಾರಿಗಳು, ಕ್ಲಸ್ಟರಿನ ಮುಖ್ಯ ಶಿಕ್ಷಕ,ಸಹ ಶಿಕ್ಷಕ ವೃಂದದವರು,ಪಾಲಕರಾದ ಸೋಮಣ್ಣ ಶ್ರೀಕೃಷ್ಣ ವೇಳಿಪ,ರೇಷ್ಮಾ ಸೋಮಣ್ಣ ವೇಳಿಪ,ವೇದಾಂಗ ಸೋಮಣ್ಣ ವೇಳಿಪ, ಶ್ರೀಕೃಷ್ಣ ಸೋಮಣ್ಣ ವೇಳಿಪ,ರಾಧಿಕಾ ಶ್ರೀಕೃಷ್ಣ ವೇಳಿಪ,ಭಾಗೀರಥಿ ಸೋಮಣ್ಣ ವೇಳಿಪ,ನಂದಿಗದ್ದೆ ಗ್ರಾಮ ಪಂಚಾಯತದ ನಿಕಟ ಪೂರ್ವ ಸದಸ್ಯರಾದ ಧವಳೋ ಗಣೇಶ ಸಾವರಕರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.