ಸುದ್ದಿ ಕನ್ನಡ

ಜೋಯಿಡಾ:ತಾಲೂಕಿನ ರಾಮನಗರ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹನುಮಾನಲೇನ್ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ದಾಸಶ್ರೇಷ್ಠರಾದ ಕನಕದಾಸರ ಜಯಂತ್ಯುತ್ಸವವನ್ನು ಆಚರಿಸಲಾಯಿತು.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಬಿ ಹೆಚ್ ಭಾಗವಾನ ಹಾಗೂ ಸಹ ಶಿಕ್ಷಕರಾದ ಮಂಜುನಾಥ ಕೊಟಬಾಗಿಯವರು ಕನ್ನಡ ಸಾಹಿತ್ಯ ಕ್ಷೇತ್ರದ ಕೀರ್ತನಕಾರರು,ಸಂತಕವಿ ಕನಕದಾಸರ ಜೀವನ ಭೋದನೆಗಳು,ಕೀರ್ತನೆಗಳು, ಸಾಧನೆಗಳು,ಕಾವ್ಯಗಳ ಕುರಿತು ಮಾತನಾಡಿದರು.ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಮಾತನಾಡಿದರು.ಸಹ ಶಿಕ್ಷಕರಾದ ಮಂಜುನಾಥ ಕೊಟಬಾಗಿಯವರು
ಸ್ವಾಗತಿಸಿ,ನಿರೂಪಿಸಿ,ವಂದಿಸಿದರು.ಶಾಲೆಯ ವಿದ್ಯಾರ್ಥಿಗಳು ಕನಕದಾಸರ ಕುರಿತು ಭಾಷಣ ಗೀತೆಗಳನ್ನು ಹಾಡಿದರು.