ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ :ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನ ರಸ್ತೆ ಸಂಪೂರ್ಣ ಹಾಳಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.
ಪ್ರತಿದಿನ ಇಲ್ಲಿ ವಾಹನದಟ್ಟೆನೆ ಉಂಟಾಗುತ್ತಿದ್ದು ವಾಹನಗಳು ಹಾಳಾಗಿ ಘಾಟ್ ಮಧ್ಯದಲ್ಲಿಯೇ ನಿಂತುಕೊಳ್ಳುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಕಂಡುಬರುತ್ತದೆ. ಬುಧವಾರ ಕೂಡ ಇದೇ ರೀತಿಯ ಘಟನೆ ನಡೆದು ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ಅರಬೈಲ್ ಘಾಟ್ ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆ ಹಾಳಾಗಿದ್ದರಿಂದ ಜೀವ ಕೈಯಲ್ಲಿ ಹಿಡಿದು ವಾಹನ ಓಡಿಸುವ ಪರಿಸ್ಥಿತಿ ಎದುರಾಗಿದೆ.
ಸರ್ಕಾರ ಎಚ್ಚೆತ್ತು ಈ ಹೆದ್ದಾರಿಯನ್ನು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಜನತೆ ಆಗ್ರಹಿಸಿದ್ದಾರೆ.