ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾ ರಾಜ್ಯ ಜಲಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನೀಯರ್ ಪ್ರಮೋದ ಬಾದಾಮಿ ರವರ ಅಧಿಕಾರಾವಧಿಯನ್ನು ರಾಜ್ಯ ಸರ್ಕಾರ 6 ತಿಂಗಳ ಕಾಲ ವಿಸ್ತರಣೆ ಮಾಡಿದೆ. ಈ ಕುರಿತು ಗೋವಾ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಬಾದಾಮಿ ರವರು ಪ್ರಸಕ್ತ ಡಿಸೆಂಬರ್ 1 ರಿಂದ 2025 ರ ಮೇ 31 ರ ವರೆಗೆ ಅಧಿಕಾರಾವಧಿ ಮುಂದುವರೆಯಲಿದೆ.

ಗೋವಾ ರಾಜ್ಯ ಜಲಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನೀಯರ್ ಪ್ರಮೋದ ಬಾದಾಮಿ ರವರು ಕಳೆದ ನರೆಂಬರ್ 30 ರಂದು ನಿವೃತ್ತಿಯಾಗಬೇಕಿತ್ತು. ರಾಜ್ಯಾದ್ಯಂತ ಜಲಸಂಪನ್ಮೂಲ ಇಲಾಖೆಯ ಹಲವು ಕಾಮಗಾರಿಗಳು ಬಾಕಿ ಉಳಿದಿವೆ. ಹಲವೆಡೆ ನೀರು ಸಣಗ್ರಹಿಸಲು ಅಣೆಕಟ್ಟುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದರಿಂದಾಗಿ ಆಡಳಿತಾತ್ಮಕ ಕೆಲಸದಲ್ಲಿ ಹೆಚ್ಚಿನ ಅನುಭವ ಹೊಂದಿರುವ ಪ್ರಮೋದ ಬಾದಾಮಿ ರವರ ಅಧಿಕಾರಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿ ಆದೇಶ ಹೊರಡಿಸಿದೆ.