ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಮಂಡ್ಯದಲ್ಲಿ 87 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ಬೃಹತ್ ಸಮ್ಮೇಳನವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಧ್ಘಾಟಿಸಲಿದ್ದಾರೆ.

ಡಿಸೆಂಬರ್ 20 ರಂದು ಬೆಳಿಗ್ಗೆ 6 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ತಮ್ಮ ಅಮೋಘ ಪ್ರದರ್ಶನ ನೀಡಿದರು. ಈ ಬೃಹತ್ ಮೆರವಣಿಗೆಯ ಮೂಲಕ ಸಮ್ಮೇಳನಾಧ್ಯಕ್ಷ ನಾಡೋಜ ಡಾ.ಗೊ.ರು.ಚನ್ನಬಸಪ್ಪ ರವರನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು.

ಈ ಬೃಹತ್ ಮೆರವಣಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ, ಬೆಳಗಾವಿ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು.