ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಡಿಸೆಂಬರ್ 20 ರಿಂದ ಅಖಿಲ ಭಾರತ 87 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ನಗರದಲ್ಲಿ ನಡೆಯುತ್ತಿದೆ. ಸಮ್ಮೇಳನದ ಗೌರವಾಧ್ಯಕ್ಷರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಜಗಧ್ಗುರು ಡಾ.ನಿರ್ಮಲಾನಂದ ಮಹಾಸ್ವಾಮಿಗಳನ್ನು ಕನ್ನಡದ ಸ್ವಾಮಿಗಳೆಂದೇ ಖ್ಯಾತಿಯಾದ ಬೆಳಗಾವಿ ಹುಕ್ಕೇರಿ ಹಿರೇಮಠದ ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ, ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ ರವರು ಶ್ರೀಗಳನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಡಾ.ನಿರ್ಮಲಾನಂದ ಸ್ವಾಮೀಜಿ ಮಾತನಾಡಿ- ಗೋವಾ ರಾಜ್ಯದಲ್ಲಿ ಹುಕ್ಕೇರಿ ಹಿರೇಮಠದ ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೋವಾ ರಾಜ್ಯಾಧ್ಯಕ್ಷರಾದ ಡಾ.ಸಿದ್ಧಣ್ಣ ಮೇಟಿ ರವರು ಮತ್ತು ಗೋವಾ ರಾಜ್ಯದಲ್ಲಿರುವ ಕನ್ನಡ ಸಂಘಗಳು ಕನ್ನಡದ ಕಾರ್ಯಕ್ರಮ ಮಾಡುತ್ತಿರುವುದು ನಮಗೆ ಅತೀವ ಸಂತೋಷ ತಂದಿದೆ. ಹೊರ ರಾಜ್ಯದಲ್ಲಿದ್ದುಕೊಂಡು ಕನ್ನಡಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದು ಅತೀವ ಸಂತೋಷದ ಸಂಗತಿ ಎಂದರು.
ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಗಳು ಮಾತನಾಡಿ- ಗೋವಾ ರಾಜ್ಯದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವಲ್ಲಿ ಸಾಕಷ್ಟು ಜನ ಕನ್ನಡಿಗರು ಪರಿಶೃಮಿಸುತ್ತಿದ್ದಾರೆ ಎಂದರು.
ಡಾ.ಸಿದ್ಧಣ್ಣ ಮೇಟಿ ಮಾತನಾಡಿ -ಗೋವಾ ರಾಜ್ಯದಲ್ಲಿ ಇಂದು ಕನ್ನಡ ಉಳಿದಿದೆ ಎಂದಾದರೆ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಯವರ ಮಾರ್ಗದರ್ಶನವೇ ಕಾರಣ ಎಂದರು. ಈ ಸಂದರ್ಭದಲ್ಲಿ ಕುಮಟಾ ತಾಕೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಉಪಸ್ಥಿತರಿದ್ದರು.