ಸುದ್ಧಿಕನ್ನಡ ವಾರ್ತೆ
ನವದೆಹಲಿ: ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರವರು ಡಿಸೆಂಬರ್ 26 ರಂದು ರಾತ್ರಿ 9.51 ಕ್ಕೆ ದೆಹಲಿಯ ಏಮ್ಸ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಏಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರು ನಿಧನರಾಗಿದ್ದಾರೆ.
ಮನಮೋಹನ್ ಸಿಂಗ್ ರವರು ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು.

 

ಕಾಂಗ್ರೇಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರು ಬೆಳಗಾವಿಯಲ್ಲಿ ನಡೆಯಲಿದ್ದ ಮಹಾಮೋರ್ಚಾದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದರು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ವಾರ್ತೆ ತಿಳಿಯುತ್ತಿದ್ದಂತೆಯೇ ಕಾರ್ಯಕ್ರಮವನ್ನು ರದ್ಧುಗೊಳಿಸಿ ದೆಹಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

             ಕರ್ನಾಟಕದಲ್ಲಿ ಶುಕ್ರವಾರ ರಜೆ ಘೋಷಣೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಶುಕ್ರವಾರ ಸರ್ಕಾರಿ ರಜೆ ಘೋಷಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆಯ ಜೊತೆಗೆ ಶುಕ್ರವಾರ ಒಂದು ದಿನ ಸರ್ಕಾರಿ ರಜೆ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ನಡೆಯಬೇಕಿದ್ದ ಸಮಾವೇಶ ಕೂಡ ರದ್ಧಾಗಿದೆ.