ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ಮಹೇಂದ್ರ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಯಲ್ಲಾಪುರ ಪೋಲಿಸರು ಜೋಡುಕೆರೆ ಬಳಿ ಪೊಲೀಸರು ರಕ್ಷಿಸಿದ್ದಾರೆ.
ಈ ಸಂಬಂಧ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಗಬ್ಬೂರಿನ ಫಕೀರಪ್ಪ ಗುಡ್ಡಪ್ಪ ದೊಡ್ಡಮನಿ ಹಾಗೂ ಹಾನಗಲ್ಲಿನ ಮಂಜು ಫಕೀರಪ್ಪ ಹರಿಜನ ಬಂಧಿತರು. ಇವರು ಮಹೇಂದ್ರ ಪಿಕಪ್ ವಾಹನದಲ್ಲಿ 6 ಎತ್ತುಗಳನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.
ಎತ್ತುಗಳನ್ನು ರಕ್ಷಿಸಿ, ವಾಹನ ವಶಪಡಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.