ಸುದ್ಧಿಕನ್ನಡ ವಾರ್ತೆ
Goa: ತಂದೆ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಹತ್ತನೇಯ ತರಗತಿ ಓದುತ್ತಿದ್ದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಗೋವಾದ ಧಾರಾಬಾಂದೋಡಾದ ಕುಳೆ ಊರಿನಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಪೋಲಿಸರು ಘಟನಾ ಸ್ಥಳಕ್ಕೆ ತೆರಳಿ ಪಂಚನಾಮೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಹತ್ತನೇಯ ತರಗತಿ ಓದುತ್ತಿದ್ದ ವಿದ್ಯಾರ್ಥಿ ಕಳೆದ ಕೆಲ ದಿನಗಳಿಂದ ತನ್ನ ತಂದೆಯ ಬಳಿ ಮೊಬೈಲ್ ಕೊಡಿಸಬೇಕೆಂದು ಹಠ ಹಿಡಿದಿದ್ದ. ಭಾನುವಾರ ತಂದೆಯು ಮಗನ ಮೇಲೆ ಸಿಟ್ಟಾಗಿ ಮಾತನಾಡಿದ್ದ ಎನ್ನಲಾಗಿದೆ. ಇದರಿಂದ ಬೇಸರಗೊಂಡಿದ್ದ ಮಗ ತಾವು ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುಟುಂಬ ಬಿಹಾರ ಮೂಲದವರಾಗಿದ್ದು ಕಳೆದ ಅನೇಕ ವರ್ಷಗಳಿಂದ ಗೋವಾದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.