ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ,: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರ್ಬೈಲ್ ಘಾಟ್ ಬಳಿ ತರಕಾರಿ ಲಾರಿ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು.
ಈ ಘಟನೆಯ ಕುರಿತು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ಕೂಡ ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂ ಪರಿಹಾರ ಮೊತ್ತವನ್ನು ಘೋಷಿಸಿದೆ.
ಅಪಘಾತದಲ್ಲಿ ಪ್ರಾಣ ಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವವರಿಗೆ ಸಾಂತ್ವನ ಹೇಳುತ್ತಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.