ಸುದ್ದಿ ಕನ್ನಡ ವಾರ್ತೆ

ಬೆಳಗಾವಿ: ಕಲಬುರಗಿ ಮಣೂರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಬೈಲಹೊಂಗಲ ಪಟ್ಟಣದಲ್ಲಿರುವ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಅತ್ಯುತ್ತಮ ಸ್ಥಾನ ಗಳಿಸಿ ತಮ್ಮ ಅಪೂರ್ವ ಪ್ರತಿಭೆಯನ್ನು ಪ್ರತಿಬಿಂಬಿಸಿದ *ಕನ್ನಡ ಜಾನಪದ ಪರಿಷತ್ತಿನ ಬೈಲಹೊಂಗಲ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ರುದ್ರಪ್ಪ ಕೊಪ್ಪದ ಅವರನ್ನು* ಕರ್ನಾಟಕ ಸರ್ಕಾರದ ಧಾರವಾಡ ರಂಗಾಯಣದ ನಿಕಟಪೂರ್ವ ನಿರ್ದೇಶಕರಾದ ಶ್ರೀ ರಮೇಶ ಪರವಿನಾಯ್ಕರ ಅವರು ಗೌರವಿಸಿ, ಅಭಿನಂದಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ, ಹಿರಿಯ ಸಹಕಾರಿ ಶ್ರೀ ಮೆಹಬೂಬ ಸುಭಾನಿ ಖಿಲಾರಿ, ಸಮಾಜಸೇವಕ ಶ್ರೀ ಶಿವಾನಂದ ಶಿರಸಂಗಿ ಉಪಸ್ಥಿತರಿದ್ದರು.