ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಅಭಿನಯ ಚಕ್ರವರ್ತಿ ಎಂದೇ ಖ್ಯಾತರಾಗಿರುವ ನಟ ಕಿಚ್ಚ ಸುದೀಪ್ ರವರು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.(Actor Kichcha Sudeep popularly known as Abhinaya Chakraborty has refused the Karnataka State Film Award)
ಫೈಲ್ವಾನ್ ಚಲನಚಿತ್ರದ ಅಭಿನಯಕ್ಕಾಗಿ ನಟ ಕಿಚ್ಚ ಸುದೀಪ್ (Kichcha Sudeep) ರವರಿಗೆ 2019 ನೇಯ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಆದರೆ ನಟ ಕಿಚ್ಚ ಸುದೀಪ್ ರವರು ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.
ಈ ಕುರಿತಂತೆ ಕಿಚ್ಚ ಸುದೀಪ್ ರವರೇ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಸರ್ಕಾರ, ಜ್ಯೂರಿ ಸದಸ್ಯರಿಗೆ ಧನ್ಯವಾದಗಳು. ಉತ್ತಮ ನಟ ಎಂದು ನನ್ನನ್ನು ಆಯ್ಕೆ ಮಾಡಿದ್ದಕ್ಕೆ ನಾನು ಚಿರ ಋಣಿ. ಕಳೆದ 7 ವರ್ಷಗಳಿಂದ ನಾನು ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ. ನಾನು ಪ್ರಶಸ್ತಿ ತೆಗೆದುಕೊಳ್ಳದಿರಲು ನಾನಾ ಕಾರಣಗಳಿವೆ. (There are many reasons why I did not take the award.) ನನಗಿಂತ ಅತ್ಯುತ್ತಮವಾಗಿ ಅಭಿನಯಿಸುವ ನಟ-ನಟಿಯರಿದ್ದಾರೆ. ಅವರಿಗೆ ಈ ರೀತಿಯ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಿ. ಹೊಸಬರಿಗೆ ಪ್ರಶಸ್ತಿ ಕೊಟ್ಟಷ್ಟೂ ನನಗೆ ತೃಪ್ತಿ ಎಂದು ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ.