ಸುದ್ಧಿಕನ್ನಡ ವಾರ್ತೆ
Goa : ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಗೋವಾದ ಭಕ್ತರು ಭಾಗವಹಿಸಲು ಗೋವಾದಿಂದ ಪ್ರತ್ಯೇಕ ರೈಲು ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರವು ಪ್ರಯತ್ನ ನಡೆಸಿದೆ. ಆದರೆ ಈ ಪ್ರಯಾಣ ಉಚಿತವಾಗಿರುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.

ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳವು  (mahakuba mela) ಹಿಂದೂ ಧರ್ಮದ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಜನವರಿ 13 ರಿಂದ ಮಹಾಕುಂಭ ಮೇಳ ಆರಂಭಗೊಂಡಿದ್ದು ಫೆಬ್ರುವರಿ 26 ರ ವರೆಗೆ ನಡೆಯಲಿದೆ.
ಮಹಾ ಕುಂಭ ಮೇಳದಲ್ಲಿ ಗಂಗಾ,ಯಮುನಾ,ಸರಸ್ವತಿ ನದಿಗಳ ಸಂಗಮದಲ್ಲಿ ಸ್ನಾನ ಮಾಡುವುದರಿಂದ ಮೋಕ್ಷ ಲಭಿಸುತ್ತದೆ ಎಂಬ ನಂಭಿಕೆಯಿದೆ. ಇದರಿಂದಾಗಿ ಮಹಾಕುಂಭಮೇಳದಲ್ಲಿ ಕೋಟ್ಯಂತರ ಭಕ್ತರು ಈ ಸಂಗಮ ತೀರಕ್ಕೆ ಆಗಮಿಸಿ ಸ್ನಾನ ಮಾಡುತ್ತಾರೆ.

ಮಹಾಕುಂಭಮೇಳದಲ್ಲಿ (mahakumba mela)ಗೋವಾದ ಭಕ್ತಾದಿಗಳು ಪಾಲ್ಗೊಳ್ಳುವಂತಾಗಲು ಪ್ರತ್ಯೇಕ ರೈಲು ವ್ಯವಸ್ಥೆ ಮಾಡಲು ಗೋವಾ ಸರ್ಕಾರ ಪ್ರಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ರೈಲ್ವೆ ಆಡಳಿತದೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಪ್ರಯಾಣ ಉಚಿತವಾಗಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.