ಸುದ್ಧಿಕನ್ನಡ ವಾರ್ತೆ
Goa : ಗೋವಾ ರಾಜ್ಯವು ಶೀಘ್ರದಲ್ಲಿಯೇ ಶೇ.100 ರಷ್ಟು ಸಾಕ್ಷರಗೊಳ್ಳಲಿದೆ. ದೇಶದಲ್ಲಿಯೇ ಗೋವಾ ಸಂಪೂರ್ಣ ಸಾಕ್ಷರತೆ ಹೊಂದಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಪಾತ್ರವಾಗಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜವರಿ 26 ರಂದು ಪಣಜಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಾವಂತ್- ಗೋವಾ ರಾಜ್ಯದಲ್ಲಿ ಮಾತ್ರವಲ್ಲದೆಯೇ ದೇಶಾದ್ಯಂತ ಎಲ್ಲರೂ ಸಾಕ್ಷರರಾಗಿ ಓದಲು ಬರೆಯಲು ಬರುವಂತಾಗುವುದು ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಶೈಕ್ಷಣಿಕ ಅಭಿಯಾನವನ್ನು ಆರಂಭಿಸಿದ್ದಾರೆ. ಗೋವಾದಲ್ಲಿ ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡಲು ಅನಕ್ಷರಸ್ಥರನ್ನು ಹಳ್ಳಿ ಹಳ್ಳಿಗಳಲ್ಲಿ ಹುಡುಕಿ ಪತ್ತೆಹಚ್ಚಿ ಸಾಕ್ಷರರನ್ನಾಗಿ ಮಾಡುವ ಕಾರ್ಯ ಆರಂಭಿಸಲಾಗಿದೆ ಎಂದರು.

ಗೋವಾ ರಾಜ್ಯವು ಶೇ 100 ರಷ್ಟು ಸಾಕ್ಷರತೆ ಹೊಂದಲು ಪ್ರಯತ್ನಶೀಲವಾಗಿದೆ. ಸಾಕ್ಷರತಾ ಅಭಿಯಾನದ ಮೂಲಕ ಶಿಕ್ಷಣ ಪಡೆಯುವವರಿಗೆ ವಿಶೇಷ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಸಾಕ್ಷರತೆಯಲ್ಲಿ ದಾಖಲು ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.