ಸುದ್ಧಿಕನ್ನಡ ವಾರ್ತೆ
ಉತ್ತರಪ್ರದೇಶ: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಸಂಭವಿಸಿದ ಕುಂಭ ಮೇಳದಲ್ಲಿ ಕರ್ನಾಟಕದಿಂದ ತೆರಳಿದ್ದ ಕನ್ನಡಿಗರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.
ಬೆಳಗಾವಿಯಿಂದ 60 ಕ್ಕೂ ಹೆಚ್ಚು ಜನರು ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭ ಮೇಳಕ್ಕೆ ಬಸ್ ನಲ್ಲಿ ತೆರಳಿದ್ದರು. ಈ ಪೈಕಿ ಕೆಲವರು ನಾಪತ್ತೆಯಾಗಿದ್ದಾರೆಂದು ಸರೋಜಿನಿ ನಡುವಿನಹಳ್ಳಿ ಮಾಹಿತಿ ನೀಡಿದ್ದಾರೆ. ಇದ್ದಕ್ಕಿದ್ದಂತೆಯೇ ಕಾಲ್ತುಳಿತ ಉಂಟಾಗಿದ್ದರಿಂದ ನಮ್ಮ ಗುಂಪಿನಲ್ಲಿದ್ದ ನಾಲ್ಕೈದು ಜನ ಕಾಣುತ್ತಿಲ್ಲ ಎಂದು ಆತಂಕಕ್ಕೊಳಗಾಗಿದ್ದಾರೆ. ಬೆಳಗಾವಿ ನಗರದ ಶೆಟ್ಟಿಗಲ್ಲಿಯ ದಂಪತಿ ಅರುಣ ಕೋಪರ್ಡೆ, ಕಾಂಚನಾ ಕೋಪರ್ಡೆ ದಂಪತಿಗಳು ಕಾಲ್ತುಳಿತದಲ್ಲಿ ಹಾಯಗೊಂಡಿದ್ದಾರೆ ಎನ್ನಲಾಗಿದೆ.
ಕನ್ನಡಿಗರು ಸ್ವಲ್ಪ ಜಾಗರೂಕರಾಗಿರಿ-ಸಿಎಂ
ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ಧಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಕಾಲ್ತುಳಿತದಲ್ಲಿ ಕನ್ನಡಿಗರು ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನೂ ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ಕನ್ನಡಿಗರ ರಕ್ಷಣೆಗೆ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ. ಕನ್ನಡಿಗರು ಸ್ವಲ್ಪ ಎಚ್ಚರವಾಗಿರಿ ಎಂದು ಕರ್ನಾಟಕದ ಮುಖ್ಯಮಂತ್ರಿ ತಮ್ಮ ಎಕ್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬೆಳಗಾವಿಯ ತಾಯಿ ಮಗಳು ಸಾವು:
ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಠ, ಹಾಗೂ ಮಗಳು ಮೇಘಾ ಹತ್ತರವಾಠ ರವರು ಮೃತಪಟ್ಟ ಘಟನೆ ನಡೆದಿದೆ.