ಸುದ್ಧಿಕನ್ನಡ ವಾರ್ತೆ
ಪ್ರಯಾಗರಾಜ್: ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಭೀಕರ ಘಟನೆಯೊಂದು ನಡೆದುಹೋಗಿದೆ. ಭಕ್ತರ ಸಂಖ್ಯೆ ದಿಢೀರ್ ಹೆಚ್ಚಾದ ಹಿನ್ನೆಲೆಯಲ್ಲಿ ಕಾಲ್ತುಳಿತ ಉಂಡಾಗಿ 30 ಭಕ್ತರು ಸಾವನ್ನಪ್ಪಿದ್ದು 90 ಜನ ಭಕ್ತರಿಗೆ ಗಾಯವಾಗಿದೆ. ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದ್ದಾರೆ.
ಈ ಘಟನೆ ನಮಗೂ ಒಂದು ಪಾಠ ಎಂದ ಮುಖ್ಯಮಂತ್ರಿ ಆದಿತ್ಯನಾಥ-ಈ ಘಟನರಯ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ನ್ಯಾಯಮೂರ್ತಿ ಹರ್ಷಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಘಟನೆಯ ತನಿಖೆಯನ್ನು ಮೂವರು ಸದಸ್ಯರ ಸಮೀತಿ ನಡೆಸಲಿದೆ ಎಂಬ ಮಾಹಿತಿ ನೀಡಿದ್ದಾರೆ.
ಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯ ಪ್ರಯುಕ್ತ ಸಾಗರೋಪಾದಿಯನ್ನು ಭಕ್ತರು ಆಗಮಿಸಿದ್ದರು. ಇಂದು ಬೆಳಗಿನ ಜಾವ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ, 90 ಜನ ಭಕ್ತರು ಗಾಯಗೊಂಡಿದ್ದಾರೆ.