ಸುದ್ದಿಕನ್ನಡ ವಾರ್ತೆ
ಪಣಜಿ: ಗೋವಾ ಸರ್ಕಾರವು ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಲವು ಬದಲಾವಣೆಯನ್ನು ತರುತ್ತಿದೆ. ರಾಜ್ಯದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು ಗೋವಾ ಸರ್ಕಾರ ಶಾಲಾ ವ್ಯವಹಾರಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳಿಗೆ ಅಪಾರ್ ಕಾರ್ಡ ಖಡ್ಡಾಯಗೊಳಿಸಿದೆ.
ಏನಿದು ಅಪಾರ್ ಕಾರ್ಡ…?
ಗೋವಾ ರಾಜ್ಯ ಶಿಕ್ಷಣ ನಿರ್ದೇಶನಾಲಯವು ಶಾಲೆಗಳಲ್ಲಿ ಎಲ್ಲಾ ವ್ಯವಹಾರಗಳನ್ನು ನಡೆಸಲು ಅಪಾರ್ ಕಾರ್ಯ ಖಡ್ಡಾಯಗೊಳಿಸಿದೆ. ವಿದ್ಯಾರ್ಥಿಗಳು ಶಾಲೆಗಳ ಬದಲಾವಣೆ, ಮಧ್ಯಾನ್ಹದ ಊಟ ಮತ್ತು ಇತರ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಅಪಾರ್ ಕಾರ್ಡ ಮೂಲಕ ಮಾತ್ರ ಪಡೆಯಲು ಸಾಧ್ಯವಾಗಲಿದೆ. ಇದರಿಂದಾಗಿ ರಾಜ್ಯ ಶಿಕ್ಷಣ ನಿರ್ದೇಶನಾಯವು ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅಪಾರ್ ಕಾರ್ಡ ಗುರುತಿನ ಚೀಟಿ ನೀಡುವ ಪ್ರಕ್ರಿಯೆ ತ್ವರಿತಗೊಳಿಸಲು ಸೂಚಿಸಿದೆ.
ಗೋವಾ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರವನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಎಲ್ಲ ಶಾಲೆಗಳ ವಿದ್ಯಾರ್ಥಿಗಳಿಗೆ 12 ಅಂಕಿಗಳುಳ್ಳ ಗುರುತಿನ ಚೀಟಿಯನ್ನು ನೀಡುವುದಾಗಿ ಘೋಷಿಸಿತ್ತು. ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಮತ್ತು ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಡಿಜಿಟಲ್ ಗುರುತಿನ ಚೀಟಿ ಒದಗಿಸುವ ಉದ್ದೇಶ ಇದಾಗಿದೆ.
ಅಪಾರ ಕಾರ್ಡ ಪ್ರಯೋಜನಗಳು,,,,
ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ ವರ್ಗಾವಣೆ ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಾಗ ವಿದ್ಯಾರ್ಥಿಗಳು ತಮ್ಮ ಅಪಾರ ಕಾರ್ಡನ್ನು ಪ್ರಾಥಮಿಕ ಗುರುತಿನ ಚೀಟಿಯಾಗಿ ಬಳಸುವುದು ಖಡ್ಡಾಯವಾಗಿದೆ ಎಂದು ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಮತ್ತು ಮಧ್ಯಾನ್ಹದ ಊಟ ಮತ್ತು ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಈ ಅಪಾರ ಕಾರ್ಡ ಹೊಂದಿರುವುದು ಖಡ್ಡಾಯವಾಗಿದೆ.
ಪಾಲಕರು ತಮ್ಮ ವಾರ್ಡ್‌ಗಳ ಆಧಾರ್ ಕಾರ್ಡ್ ವಿವರಗಳನ್ನು ಜನನ ಪ್ರಮಾಣಪತ್ರದೊಂದಿಗೆ ಹೊಂದಿಕೆಯಾಗದಿದ್ದರೆ ಮತ್ತು ಹತ್ತಿರದ ಆಧಾರ್ ತಿದ್ದುಪಡಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಸರಿಪಡಿಸಲು ವಿನಂತಿಸಲಾಗಿದೆ.