ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ತಾಲೂಕಿನ ಗುಳ್ಳಾಪುರದಲ್ಲಿ ಫೆಬ್ರವರಿ 23ರಂದು ಸಂಜೆ ಆಲೆಮನೆ ಹಬ್ಬ ಜರುಗಲಿದೆ. ಈ ಹಾಲೆಮನೆ ಹಬ್ಬದಲ್ಲಿ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆ.
ಲಕ್ಷ್ಮಿಪ್ರಿಯಾ ಕೆ. IAS ಮಾನ್ಯ ಜಿಲ್ಲಾಧಿಕಾರಿಗಳು ಉತ್ತರ ಕನ್ನಡ ಜಿಲ್ಲೆ ಅವರಿಗೆ ಕಾರವಾರದ ಡಿಸಿ ಕಚೇರಿಯಲ್ಲಿ ಗುಳ್ಳಾಪುರ ಉತ್ಸವ (ಆಲೆಮನೆ ಹಬ್ಬ) ದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮದ ಉದ್ಘಾಟಕರಾಗಿ ಬರುವಂತೆ ಆಹ್ವಾನಿಸಲಾಯಿತು.
ಕಳೆದ ಹಲವು ವರ್ಷಗಳಿಂದ ಹಂತ ಹಂತವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದರಿಂದಾಗಿ ಮನೆಮನೆಯಲ್ಲಿ ಆಲೆಮನೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಆಲೆಮನೆ ಹಬ್ಬಗಳು ಹೆಚ್ಚಿನ ಆಕರ್ಷಣೆಯನ್ನು ಪಡೆಯುತ್ತಿವೆ.