ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ತಾಲೂಕಿನ ಆರತಿ ಬೈಲ್ ಘಟ್ಟದ ಕೆಳಗಿನ ತಿರುವಿನಲ್ಲಿ ಸೋಮವಾರ ಸಂಜೆ 5,30 ಸುಮಾರಿಗೆ ಹಳ್ಳಕ್ಕೆ ಉರುಳಿದ ಸಿಮೆಂಟ್ ಲಾರಿ ಭೀಕರ ಅಪಘಾತಕ್ಕೀಡಾದ ಘಟನೆ ನಡೆದಿದೆ.
ಲಾರಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಪ್ರಕರಣ ದಾಖಲಿಸಿಕೊಂಡಿದೆ.
ಹರಬೈಲ್ ಘಟ್ಟ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಾಹನ ಸವಾರರು ಬಹುವೇಗದಿಂದ ವಾಹನ ಚಲಾಯಿಸುತ್ತಿರುವುದು ಕೂಡ ಹೆಚ್ಚಿನ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.