ಸುದ್ದಿ ಕನ್ನಡ ವಾರ್ತೆ

ಬೆಳಗಾವಿ: ನಾಡಿನ ಹೆಮ್ಮೆಯ ಕನ್ನಡದ ಶಕ್ತಿ ಕೇಂದ್ರ, ಕರ್ನಾಟಕ ವಿದ್ಯಾವರ್ಧಕ ಸಂಘವು ಮುದ್ರಿಸಿದ *೨೦೨೫* ರ ಕನ್ನಡ ಅಂಕಿಗಳುಳ್ಳ ದಿನದರ್ಶಿಕೆಯನ್ನು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಿ.ಎಂ. ತ್ಯಾಗರಾಜ ಅವರಿಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರು, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ ರವರು ಅರ್ಪಿಸಿದ ಸಂದರ್ಭ.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲೆಯ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ, ಶಿಕ್ಷಣ ಮತ್ತು ಆರ್ಥಿಕ ತಜ್ಞರಾದ ಪ್ರೊ. ಶಿವಜಾತ ಸೋಮಣ್ಣನವರ ಉಪಸ್ಥಿತರಿದ್ದರು.