ಸುದ್ದಿ ಕನ್ನಡ ವಾರ್ತೆ
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಿ.ಎಂ. ತ್ಯಾಗರಾಜ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ ರವರು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಸ್ತಿ “ಕನ್ನಡ ಭವನಕ್ಕೆ ” ಭೇಟಿ ನೀಡಿ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅನೇಕ ಸಲಹೆಗಳನ್ನು ನೀಡಿದರು.
ಪರಿಷತ್ತಿನ ಎಲ್ಲ ಕಾರ್ಯಗಳಿಗೆ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ, ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ, ಟಿಎಸ್ಆರ್ ಪ್ರಶಸ್ತಿ ಪುರಸ್ಕೃತ , ಹಿರಿಯ ಪತ್ರಕರ್ತರಾದ ಡಾ. ಸರಜೂ ಕಾಟ್ಕರ್, ಧಾರ್ಮಿಕ ದತ್ತಿ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ಕವಿ, ಸಾಹಿತಿ, ಸಂಘಟಕರಾದ ರವಿ ಕೋಟಾರಗಸ್ತಿ, ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಎ.ಬಿ. ಘಾಟಗೆ, ಕಸಾಪ ಸಂಘಟನಾ ಕಾರ್ಯದರ್ಶಿ ಶ್ರೀ ವೀರಭದ್ರ ಅಂಗಡಿ, ಉದಯೋನ್ಮುಖ ಕವಿ, ಸಂಘಟಕರಾದ ಶ್ರೀ ಆನಂದ ಕೊಂಡಗುರಿ ಇನ್ನಿತರರು ಉಪಸ್ಥಿತರಿದ್ದರು.