ಸುದ್ದಿ ಕನ್ನಡ ವಾರ್ತೆ
ಶಿರಸಿ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಹರಿದ್ವಾರದ ಪತಂಜಲಿ ವಿಶ್ವವಿದ್ಯಾಲಯದಲ್ಲಿ ನಡೆಸಿದ ರಾಷ್ಟ್ರಮಟ್ಟದ ಅಖಿಲ ಭಾರತೀಯ ಶಾಸ್ತ್ರೋತ್ಸವದಲ್ಲಿ ತಾಲೂಕಿನ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ರಾಜರಾಜೇಶ್ವರೀ ಸಂಸ್ಕೃತ ಮಹಾಪಾಠಶಾಲೆ ಪ್ರತಿಭಾವಂತ ವಿದ್ಯಾರ್ಥಿ ನಾಗರಾಜ ಭಟ್ಟ ಗಂಗೆಮನೆ ಅವರು ಧರ್ಮಶಾಸ್ತ್ರದ ಭಾಷಣದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ಪಡೆದಿದ್ದಾರೆ. ಡಾ. ವಿನಾಯಕ ಭಟ್ಟ ಗುಂಜಗೋಡ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ
ವಿದ್ಯಾರ್ಥಿಯನ್ನು ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಹಾಗೂ ಕಿರಿಯ ಸ್ವಾಮೀಜಿಗಳು ಶ್ರೀ ಆನಂದಬೋಧೇಂದ್ರ ಸರಸ್ವತೀಮಹಾ ಸ್ವಾಮಿಗಳು, ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಾಚಾರ್ಯರು, ಪ್ರಾಧ್ಯಾಪಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.