ಸುದ್ದಿ ಕನ್ನಡ ವಾರ್ತೆ
ದಾಂಡೇಲಿ : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾಲಿ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಹೇಳಿದರು.
ಅವರು ಗುರುವಾರ ದಾಂಡೇಲಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಕಳೆದ ಒಂದು ವಾರಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಪ್ಪಿದ್ರೆ ತಾನು ಮುಖ್ಯಮಂತ್ರಿಯಾಗುತ್ತೇನೆ ಎಂಬ ವಿಚಾರ ಮಾಧ್ಯಮದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಳ್ಳುವುದು ಸಹಜ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದಾರೆ. ಹಾಗಿರುವಾಗ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.