ಸುದ್ದಿ ಕನ್ನಡ ವಾರ್ತೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. 18 ವರ್ಷದ ವಿಘ್ನೇಶ್ ಹೆಸರಿನ ಯುವಕ, 4 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹಾಗೂ ಮಾನಸಿಕ ನೋವು ಅನುಭವಿಸುತ್ತಿದ್ದ. ಈ ನೋವಿನಿಂದ ಮನನೊಂದು, ಅವನು ತನ್ನ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ವಿಘ್ನೇಶ್ ಕೊಪ್ಪದಲ್ಲಿರುವ ಐಟಿಐ ಸಂಸ್ಥೆಯಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ. ದೈಹಿಕ ಹಾಗೂ ಮಾನಸಿಕ ಪೀಡನೆ ಎದುರಿಸುತ್ತಿದ್ದ ಈ ಯುವಕ, ಯಾವಾಗಲೂ ಆಸ್ಪತ್ರೆಗೆ ಹೋಗಿ ಬರಬೇಕಾಗುತ್ತಿತ್ತು. ನಿರಂತರ ಚಿಕಿತ್ಸೆ ಮತ್ತು ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳ ನಡುವೆ ಆತ ಮಾನಸಿಕವಾಗಿ ಕುಸಿದುಕೊಂಡಿದ್ದಾನೆ.

ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.