ಸುದ್ದಿಕನ್ನಡ ವಾರ್ತೆ
Goa: ಗೋವಾ ರಾಜ್ಯಾದ್ಯಂತ ಬುಧವಾರವೂ ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಮುನ್ಸೂಚನೆ ನೀಡಿದೆ. ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯಲ್ಲೊ ಅಲರ್ಟ ಘೋಷಿಸಿದೆ.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮೊಡ ಕವಿದ ವಾತಾವರಣ ಕಂಡುಬಂದಿತ್ತು. ಮಂಗಳವಾರ ಸಂಜೆ ಗೋವಾ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗಿತ್ತು, ಈ ಮೂಲಕ ತಾಪಮಾನದಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದಿತ್ತು.

ಬುಧವಾರ ಬೆಳಿಗ್ಗೆಯಿಂದ ಗೋವಾದಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.