ಸುದ್ಧಿಕನ್ನಡ ವಾರ್ತೆ
ಪಣಜಿ: ಕವಿಶೈಲ ಕನ್ನಡ ಸಂಘ ಮಾಪ್ಸಾ ವತಿಯಿಂದ ಮಾಪ್ಸಾದ ಬಸ್ ನಿಲ್ದಾಣದ ಪಕ್ಕದಲ್ಲಿ ಕನ್ನಡ ಗಣಪನನ್ನು ಪ್ರತಿಷ್ಠಾಪಿಸಲಾಗಿದ್ದು, ಪ್ರತಿದಿನ ವಿವಿಧ ಕಾರ್ಯಕ್ರಮ ಮತ್ತು ಮಹಾಪ್ರಸಾದವನ್ನು ಆಯೋಜಿಸಲಾಗಿದೆ.
ಈ ಕುರಿತು ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ಸುದ್ಧಿಗಾರರೊಂದಿಗೆ ಮಾತನಾಡಿ- ಕಳೆದ ಅನೇಕ ವರ್ಷಗಳಿಂದ ಮಾಪ್ಸಾದಲ್ಲಿ ಕವಿಶೈಲ ಕನ್ನಡ ಸಂಘದ ವತಿಯಿಂದ ಕನ್ನಡ ಗಣಪನನ್ನು ಪ್ರತಿಷ್ಠಾಪಿಸಲಾಗುತ್ತಿದೆ. 9 ದಿನಗಳ ಕಾಲ ಗಣಪನನ್ನು ಪೂಜಿಸಲಾಗುತ್ತದೆ. ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮ, ಮಹಾಪ್ರಸಾದ ಸೇವೆಯನ್ನು ಕೂಡ ಆಯೋಜಿಸಲಾಗುತ್ತಿದೆ. ಪ್ರತಿ ವರ್ಷದಂತೆಯೇ ಪ್ರಸಕ್ತ ವರ್ಷವೂ ಕೂಡ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಸಾದ ಸ್ವೀಕರಿಸಬೇಕು ಎಂದು ಶಂಭು ಶೆಟ್ಟರ್ ಮನವಿ ಮಾಡಿದರು.