ಸುದ್ದಿಕನ್ನಡ ವಾರ್ತೆ
Goa : ಭಾನುವಾರ ಬೆಳಿಗ್ಗೆ 6.30 ರ ಸುಮಾರಿಗೆ ಗೋವಾದ ಮೋಲೆಮ್ ನಲ್ಲಿ ನಿಲ್ಲಿಸಿದ್ದ ಟ್ರಕ್‍ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಇಬ್ಬರು ಯುವಕರು ದುರಂತ ಸಾವನ್ನಪ್ಪಿದ್ದಾರೆ. ಕಳೆದ ಒಂದು ವರ್ಷದಲ್ಲಿ, ಇದುವರೆಗೆ ಇಂತಹ ಅಪಘಾತಗಳಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಸ್ಥಳೀಯರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಅಪಘಾತದಲ್ಲಿ, ಬೈಕ್ ಸವಾರ ರಾಜೇಶ್ ದೇಸಾಯಿ (25, ಮೂಲತಃ ಕರ್ನಾಟಕ) ಸ್ಥಳದಲ್ಲೇ ಸಾವನ್ನಪ್ಪಿದರೆ, ಹಿಂದೆ ಕುಳಿತಿದ್ದ ನಿಖಿಲ್ ಮಂಡಿವಾಲ್ (24, ಮೂಲತಃ ಕರ್ನಾಟಕ) ಅವರನ್ನು ಧಾರಾಬಾದೋಡಾದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ, ಅಲ್ಲಿನ ವೈದ್ಯರು ಅವರು ಮೃತಪಟ್ಟಿದ್ದಾರೆಂದು ಘೋಷಿಸಿದರು. ಇಬ್ಬರೂ ಕರ್ನಾಟಕದಿಂದ ಮೋಲೆಮ್ ಗೆ ಹೋಗುತ್ತಿದ್ದರು. ಅಷ್ಟರಲ್ಲಿ, ಕರ್ನಾಟಕದಿಂದ ಬರುತ್ತಿದ್ದ ಒಂದು ಟ್ರಕ್ ರಸ್ತೆಯಲ್ಲಿ ನಿಂತಿತ್ತು. ಅದೇ ಟ್ರಕ್‍ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕುಳೆ ಪೆÇಲೀಸರು ಸ್ಥಳಕ್ಕೆ ಧಾವಿಸಿ ಪಂಚನಾಮೆ ನಡೆಸಿದರು.

ಇಂತಹ ಅಪಘಾತಗಳು ಆಗಾಗ ಸಂಭವಿಸುತ್ತವೆ!
ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ, ರಸ್ತೆಯಲ್ಲಿ ನಿಲ್ಲಿಸುವ ಟ್ರಕ್‍ಗಳಿಂದಾಗಿ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಇಂತಹ ಅಪಘಾತಗಳಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಅಪಘಾತ ಪೀಡಿತ ಪ್ರದೇಶಗಳಲ್ಲಿ ಆಡಳಿತವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.