ಸುದ್ದಿಕನ್ನಡ ವಾರ್ತೆ
Goa : ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ ಸಾವಂತ್ ರವರು ಗುರುವಾರ 51 ನೇಯ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಾವಂತ್ ರವರು ತಮ್ಮ ಕುಟುಂಬ ಸಮೇತರಾಗಿ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸಾಖಳಿಯ ಶ್ರೀ ದತ್ತ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ಧಾಳಿಯ ಭೀಕರ ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಣಯ ತೆಗೆದುಕೊಂಡಿದ್ದರು. ಹುಟ್ಟು ಹಬ್ಬದ ಶುಭಾಷಯ ತಿಳಿಸಲು ಯಾರೂ ಕೂಡ ಬರಬಾರದು ಎಂಂದು ಕೂಡ ಸಿಎಂ ಸಾವಂತ್ ತಿಳಿಸಿದ್ದರು. ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಸೇವಾ ಕಾರ್ಯದ ಹೊರತಾಗಿ ಉಳಿದೆಲ್ಲ ಕಾರ್ಯಕ್ರಮಗಳನ್ನು ಅವರು ರದ್ದು ಮಾಡಿದ್ದರು.