ಸುದ್ದಿಕನ್ನಡ ವಾರ್ತೆ
Goa : ಕಳೆದ ಎರಡು ದಿನಗಳಿಂದ ಗೋವಾದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗೋವಾ-ಮುಂಬಯಿ ರಾಷ್ಟ್ರೀಯ ಹೆದ್ದಾರಿ ಹಲವೆಡೆ ಸಂಪೂರ್ಣ ಜಲಮಯವಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗುವಂತಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿರುವುದು ಭಾರಿ ಟ್ರಾಫಿಕ್ ಜಾಮ್ ಸಂಭವಿಸಲು ಕೂಡ ಕಾರಣವಾಗಿದೆ.

ಪ್ರಯಾಣಿಕರೋರ್ವರು ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು ಇದು ರಸ್ತೆಯೋ ಅಥವಾ ನದಿಯೋ ಎಂಬಂತೆ ಭಾಸವಾಗುತ್ತಿದೆ. ಎರಡು ದಿನಗಳ ರಣಮಳೆ ಭಾರಿ ಸಂಕಷ್ಟ ತಂದೊಡ್ಡಿದೆ.