ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಮೇ 29ರಂದು ರಜೆ ಘೋಷಿಸಿದ್ದಾರೆ.

ಸದ್ಯ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಇರುವುದರಿಂದ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ಮೇ 29ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.