ಸುದ್ದಿಕನ್ನಡ ವಾರ್ತೆ
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಮಧ್ಯಾನ್ಹ ಏರ್ ಇಂಡಿಯಾ ವಿಮಾನ ಪತನವಾಗಿದ್ದು,(Air India plane crash) ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್‍ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಎಐ-171 ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಹಾಸ್ಟೆಲ್ ಗೆ ಬಂದು ಅಪ್ಪಳಿಸಿದೆ.
ವಿಮಾನ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಅಹಮದಾಬಾದ್‍ನಲ್ಲಿ ಸಂಭವಿಸಿದ ವಿಮಾನ ದುರಂತ ನಮ್ಮನ್ನು ದಿಗ್ಭ್ರಮೆಗೊಳಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಬಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ” ಎಂದು ಎಕ್ಸ್ ನಲ್ಲಿ ಪೆÇೀಸ್ಟ್ ಮಾಡಿದ್ದಾರೆ.
ಅಹಮದಾಬಾದ್‍ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.