ಸುದ್ದಿಕನ್ನಡ ವಾರ್ತೆ
ಗುಜರಾತ್: ಗುರುವಾರ ಮಧ್ಯಾನ್ಹ ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ.

ಅಲ್ಲದೆ ವಿಮಾನ ದುರಂತದಲ್ಲಿ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಹ ಭರಿಸುತ್ತೇವೆ ಎಂದು ಟಾಟಾ ಗ್ರುಪ್ ಹೇಳಿದೆ. ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು – ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ಸಿಗುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇದರ ಹೊರತಾಗಿಯೂ ಬಿಜೆ ಮೆಡಿಕಲ್ ನ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೂ ನಾವು ಸಹಾಯ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.