ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಶುಕ್ರವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಶುಕ್ರವಾರ ಸಂಜೆಯ ವೇಳೆಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಹವಾಮಾನ ಇಲಾಖೆಯ ತುರ್ತು ಮುನ್ಸೂಚನೆಯ ಪ್ರಕಾರ ಇನ್ನು ಕೆಲವೇ ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ..

ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರಿದಿದೆ. ಇನ್ನು ಮುಂದಿನ ಮೂರು ಗಂಟೆಯ ಅವಧಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ವಿಜಯಪುರ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಧಾರವಾಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ:
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ: ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಎಲೆಕ್ಟ್ರಿಕಲ್ ಉಪಕರಣಗಳನ್ನು ತಕ್ಷಣವೇ ಅನ್ ಪ್ಲಗ್ ಮಾಡಿ. ತಕ್ಷಣವೇ ಜಲಮೂಲಗಳಿಂದ ಹೊರ ಬನ್ನಿ. ನೀವು ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.