ಸುದ್ಧಿಕನ್ನಡ ವಾರ್ತೆ
ಮಹಾರಾಷ್ಟ್ರ: ಪುಣೆ ಬಳಿಯ ಇಂದ್ರಾಯಣಿ ನದಿ ಸೇತುವೆ ಭಾನುವಾರ ಕುಸಿದು ಬಿದಿದ್ದು, ಇಬ್ಬರು ಪ್ರವಾಸಿಗರು ಮೃತಪಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಪಿಂಪ್ರಿ-ಚಿಂಚ್‍ವಾಡ್ ಜಿಲ್ಲೆಯ ಮಾವಲ್ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕುಂದಮಾಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ರಮಣೀಯ ಜಲಪಾತ ಮತ್ತು ನದಿ ದಡದಿಂದ ಪ್ರತಿವರ್ಷ ನೂರಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಇಂದು ಕೂಡಾ ಹೆಚ್ಚಾಗಿ ಪ್ರವಾಸಿಗರು ಆಗಮಿಸಿದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಈ ದುರ್ಘಟನೆಯಲ್ಲಿ 5 ರಿಂದ 6 ಜನರನ್ನು ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಪಿಂಪ್ರಿ-ಚಿಂಚ್‍ವಾಡ್ ಪೆÇಲೀಸರು ಮಾಹಿತಿ ನೀಡಿದ್ದಾರೆ.

ಭಾನುವಾರ ಬೆಳಿಗ್ಗೆ ಇದಕ್ಕಿದ್ದಂತೆ ಸೇತುವೆ ಕುಸಿದು ಬಿದ್ದಿದೆ. ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದ ತುಂಬಿ ಹರಿಯುತ್ತಿದ್ದ ನದಿಗೆ ಪ್ರವಾಸಿಗರು ಇಳಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಪೆÇಲೀಸರು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.