ಸುದ್ಧಿಕನ್ನಡ ವಾರ್ತೆ
ಪಣಜಿ: ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹಲತಾರಾ ನದಿ ಉಕ್ಕಿ ಹರಿಯುತ್ತಿದೆ. ಭಾರಿ ಮಳೆಯಿಂದಾಗಿ ಖಾನಾಪುರ ಗೋವಾ ಹೆದ್ದಾರಿಯ ಮೇಲೆ ಭಾರಿ ಪ್ರಮಾಣದಲ್ಲಿ ನದಿ ನೀರು ಉಕ್ಕಿ ಹರಿಯುತ್ತಿದೆ.
ಭಾಳಿ ಮಳೆಯಿಂದಾಗಿ ಹಬ್ಬನಟ್ಟಿಯ ಶ್ರೀ ಮಾರುತಿ ದೇವಸ್ಥಾನ ಉಳುಗಡೆಯಾಗಿದೆ. ಭಾರಿ ಮಳೆಯಿಂದಾಗಿ ಗೋವಾ-ಬೆಳಗಾವಿ ಮಾರ್ಗದಲ್ಲಿ ಓಡಾಟ ನಡೆಸುವವರು ಪರದಾಡುವಂತಾಗಿದೆ.
ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.