ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ವಾಸ್ಕೊ ಬಳಿಯ ಸಾಂಕ್ವಾಳದ ಖಾಸಗಿ ಶಾಲೆ, ಮೌಂಟ್ ಲಿಟೆರಾ ಜೀ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb threat) ಬಂದ ಹಿನ್ನೆಲೆಯಲ್ಲಿ ಕೂಡಲೆ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ತಪಾಸಣೆ ನಡೆಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಈ ಬಗ್ಗೆ ಮಾಹಿತಿ ಪಡೆದ ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BDDS) ಸ್ಥಳಕ್ಕೆ ತಲುಪಿ ಶಾಲೆ ಮತ್ತು ಪ್ರದೇಶದಲ್ಲಿ ಸಂಪೂರ್ಣ ತನಿಖೆ ಆರಂಭಿಸಿತು. ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ, ಅಥವಾ ಯಾವುದೇ ಸ್ಫೋಟಕ ವಸ್ತು ಕಂಡುಬಂದಿಲ್ಲ ಎಂದು ಪೆÇಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಸುಳ್ಳು ಎಂದು ಪೆÇಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಈ ಇ-ಮೇಲ್ ಯಾರಿಂದ ಬಂದಿದೆ ಎಂಬುದನ್ನು ಕಂಡುಹಿಡಿಯಲು ಸೈಬರ್ (Cyber) ಅಪರಾಧ ಶಾಖೆಯ ಸಹಯೋಗದೊಂದಿಗೆ ಪೆÇಲೀಸ್ ತನಿಖೆ ನಡೆಯುತ್ತಿದೆ. ಈ ಘಟನೆ ಪೆÇೀಷಕರಲ್ಲಿ ಭೀತಿ ಮೂಡಿಸಿತ್ತು, ಆದರೆ ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.