ಸುದ್ದಿ ಕನ್ನಡ ವಾರ್ತೆ

ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿ ಯಾದ ಘಟನೆ ನಡೆದಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಸೀಗೋಡು ಬಳಿ ಘಟನೆ ನಡೆದಿದೆ.

ನಿದ್ದೆಗಣ್ಣು, ಘಾಟಿ ರಸ್ತೆಯಲ್ಲಿ ಚಾಲಕನ ಕಂಟ್ರೋಲ್ ತಪ್ಪಿದ ಬಸ್ ಅಪಘಾತಕ್ಕೀಡಾಗದೆ. 17 ಜನರಿದ್ದ ಬಸ್ಸಿನಲ್ಲಿ ಡ್ರೈವರ್ ಸೇರಿ ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರ್ತಿಕ್, ಮಧು, ಚೈತ್ರ ಎಂಬ ಮೂವರಿಗೆ ಗಂಭೀರ ಗಾಯವಾಗಿದೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 17 ಜನ ಸ್ನೇಹಿತರು ಬೆಂಗಳೂರಿನಿಂದ ಆಗುಂಬೆಗೆ ಹೋಗುತ್ತಿದ್ದ ಹೋಗುತ್ತಿದ್ದ ಪ್ರವಾಸಿ ಬಸ್ ಈ ದುರ್ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.