ಸುದ್ಧಿಕನ್ನಡ ವಾರ್ತೆ
ಗೋವಾ ಸರ್ಕಾರವು ಮಹದಾಯಿ ನದಿಯ ಕರ್ನಾಟಕದ ಯೋಜನೆಗೆ ಮತ್ತೆ ಅಡ್ಡಗಾಲು ಹಾಕಲು ಹುನ್ನಾರ ನಡೆಸಿದೆ. ಮಹದಾಯಿ ವಿಷಯದಲ್ಲಿ ಗೋವಾ ರಾಜ್ಯ ಮತ್ತೆ ತನ್ನ ಕ್ಯಾತೆ ಎತ್ತಿದೆ. ಕರ್ನಾಟಕ ರಾಜ್ಯವು ಮಹದಾಯಿ ನದಿ ನೀರನ್ನು ತಿರುಗಿಸಿಕೊಳ್ಳುವ ಉದ್ದೇಶದಿಂದ ನಡೆಸಿರುವ ಚಟುವಟಿಕೆಗಳನ್ನು ಆಕ್ಷೇಪಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ. ಗೋವಾ ವಿಧಾನಸಭೆಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಮಹದಾಯಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಅಲೆಕ್ಸ ರೆಜಿನಾಲ್ಡೊ ಲಾರೆನ್ಸ ರವರು ಕೇಳಿದ್ದ ಪ್ರಶ್ನೆಗೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ಉತ್ತರಿಸಿದರು. ಮಹದಾಯಿ ನದಿಯ ನೀರನ್ನು ತಿರುಗಿಸುವ ಚಟುವಟಿಕೆಯಲ್ಲಿ ಕರ್ನಾಟಕವು ನಿರಂತರವಾಗಿ ತೊಡಗಿದೆ. ಕರ್ನಾಟಕವು ತನ್ನ ಗಡಿಯ ಒಳಭಾಗದಲ್ಲಿ ಈ ಕಾ,ಗಾರಿಯನ್ನು ನಡಟೆಸುತ್ತಿರುವುದರಿಂದ ಅದನ್ನು ತಡೆಯಲು ನಮಗೆ ಸಾಧ್ಯವಾಗುತ್ತಿಲ್ಲ. ಮಹದಾಯಿ ನದಿ ನೀರು ತಿರುಗಿಸಲು ಕರ್ನಾಟಕವು ಮಾಡುತ್ತಿರುವ ಪ್ರತಿಯೊಂದು ಪ್ರಯತ್ನಕ್ಕೂ ತಡೆಯೊಡ್ಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.

ಕೇಂದ್ರ ಸಚಿವ ಭೂಪೇಂದ್ರ ಯಾದವ ರವರನ್ನು ನಾನು ಖುದ್ದು ಭೇಟಿಮಾಡಿ ಈ ಕುರಿತು ಚರ್ಚಿಸಿದ್ದೇನೆ. ನದಿ ನೀರನ್ನು ತಿರುಗಿಸಲು ಚಟುವಟಿಕೆ ನಡೆಸಲು ಕರ್ನಾಟಕಕ್ಕೆ ಯಾವುದೇ ಅನುಮತಿ ನೀಡುವುದಿಲ್ಲ ಅವರು ಭರವಸೆ ನೀಡಿದ್ದಾರೆ. ಈ ಕುರಿತು ಸರ್ವೋಚ್ಛ ನ್ಯಾಯಾಲಯದಲ್ಲಿಯೂ ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಸಾವಂತ್ ರವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದರು.