ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ಜಾಗ ಖರೀದಿ ಮಾಡಿರುವುದು ಸಂತಸದ ಸಂಗತಿಯಾಗಿದೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರದಿಂದ ಹೆಚ್ಚಿನ ಹಣ ಬಿಡುಗಡೆ ಮಾಡಲು ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಭರವಸೆ ನೀಡಿದ್ದಾರೆ.
ಗೋವಾದ ಕಲಂಗುಟ್ ನಲ್ಲಿ ಆಯೋಜಿಸಿದ್ದ ಲಿಂಗಾಯತ-ಸ್ವತಂತ್ರ ಧರ್ಮ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತಿರಿದ್ದು ಅವರು ಮಾತನಾಡುತ್ತಿದ್ದರು. ಗೋವಾದಲ್ಲಿ ಲಕ್ಷಾಂತರ ಕನ್ನಡಿಗರು ನೆಲೆಸಿದ್ದಾರೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಈ ಹಿಂದಿನ ಕರ್ನಾಟಕ ರಾಜ್ಯ ಸರ್ಕಾರ ಕೂಡ ಹಣ ಮಂಜೂರು ಮಾಡಿತ್ತು. ಇದೀಗ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗ ಖರೀದಿಸಿರುವುದು ಸಂತಸ ತಂದಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ನುಡಿದರು.
ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾಣೆಹಳ್ಳಿಮಠದ ಪೀಠಾಧೀಶರು, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಬೆಟ್ಟಳ್ಳಿ ಮಠ ಕುಣಿಗಲ್ ತಾಲೂಕು ರವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು. ಸ್ವಯಂ ನಿನೃತ್ಥ ಸಹಾಯಕ ಪೋಲಿಸ್ ಕಮೀಶನರ್ ಲೋಕೇಶ್ವರ್ ರವರು ಸಮಾರಂಭವನ್ನು ಉಧ್ಘಾಟಿಸಿದರು. ರಾಷ್ಟ್ರೀಯ ಬಸವ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎಸ್.ಎಂ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ರವರು ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಗೋವಾ ಬಿಜೆಪಿ ಕರ್ನಾಟಕ ಸೆಲ್ ಕನ್ವೀನರ್ ಮುರಳಿ ಮೋಹನ್ ಶೆಟ್ಟಿ, ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್, ಮಾಪ್ಸಾ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್, ವಿಜಯಪುರ ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ಕಸಾ ಪ ಗೋವಾ ರಾಜ್ಯ ಘಟಕದ ಗೌರವ ಕಾರ್ಯದರ್ಶಿ ನಾಗರಾಜ ಗೋoದಕರ , ಕಸಾಪ ದಕ್ಷಿಣ ಗೋವಾ ಜಿಲ್ಲಾ ಘಟಕದ ಗೌರವಾಧ್ಯಕ್ಷ ಪಡದಯ್ಯಸ್ವಾಮಿ ಹಿರೇಮಠ, ಅಖಿಲಗೋವಾ ವೀರಶೈವ ಲಿಂಗಾಯತ ಸಮಾಜದ ರುದ್ರಯ್ಯ ಹಿರೇಮಠ, ಗೋವಾ ಕರ್ನಾಟಕ ರಾಜ್ಯೋತ್ಸವ ಕಾರ್ಯಕಾರಿ ಸಮೀತಿಯ ಸದಸ್ಯ ರಾಜೇಶ್ ಶೆಟ್ಟಿ, ಕಸಾಪ ಗೋವಾ ರಾಜ್ಯ ಘಟಕದ ತವರಪ್ಪ ಲಮಾಣಿ, ಬಸವರಾಜ್ ಪೂಜಾರಿ, ಗುರುಪಾದಯ್ಯ ಹಿರೇಮಠ, ಸುಮಿತ್ರಾ ಹರಿಜನ್, ರೇಣುಕಾ ಶೆಟ್ಟರ್, ಮತ್ತಿತರರು ಉಪಸ್ಥಿತರಿದ್ದರು.