ಸುದ್ಧಿಕನ್ನಡ ವಾರ್ತೆ
ಪಾರಿವಾಳಗಳಿಗೆ ಆಹಾರ ಹಾಕಿದರೆ ಶ್ವಾಸಕೋಶದ ಖಾಯಿಲೆ ಬರುತ್ತದೆದೆಯೇ…ಇಂತದ್ದೊಂದು ವಿಷಯ ಗೋವಾ ವಿಧಾನಸಭೆಯಲ್ಲಿ ಭಾರಿ ಚರ್ಚೆಯಶಗಿದೆ. ಗೋವಾದಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಲ್ಲಿಸುವಂತೆಯೂ ಆಘೆಹಿಸಲಾಗಿದೆ.
ಗೋವಾ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವುದಕ್ಕೆ ನಿರ್ಬಂಧ ಹೇರಬೇಕು ಎಂದು ಗೋವಾ ಫೊರ್ ವರ್ಡ ಪಕ್ಷದ ಶಾಸಕ ವಿಜಯ್ ಸರ್ದೇಸಾಯಿ ಗೋವಾ ವಿಧಾನಸಭೆಯಲ್ಲಿ ಆಘ್ರಹಿಸಿದ್ದಾರೆ. ಮಹಾರಾಷ್ಟ್ರದ 56 ಸ್ಥಳಗಳಲ್ಲಿ ಪಾರಿವಾಳಗಳ ಮೇಲೆ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ನೀಡಿದರು.
ಗೋವಾದಲ್ಲಿ ಅದರಲ್ಲೂ ಶಹರದಲ್ಲಿ ಪಾರಿವಾಳಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಇದರಿಂದಾಗಿ ಜನರ ಆರೋಗ್ಯಕ್ಕೆ ತೊಂದರೆಯುಂಟಾಗುತ್ತಿದೆ. ಇದೇ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರವು ಅಲ್ಲಿನ 56 ಸ್ಥಳಗಳಲ್ಲಿ ನಿರ್ಬಂಧ ಹೇರಿದೆ ಎಂದು ವಿಜಯ್ ಸರ್ದೇಸಾಯಿ ನುಡಿದರು.
ಪಾರಿವಾಳಗಳಿಂದ ಶ್ವಾಸಕೋಶದ ತೊಂದರೆಯುಂಟಾಗುತ್ತದೆ. ಇದರಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ ಹೇರಬೇಕು ಎಂದು ವಿಜಯ್ ಸರ್ದೇಸಾಯಿ ಆಘ್ರಹಿಸಿದರು. ಪಾರಿವಾಳಗಳು ಶ್ವಾಸಕೋಶದ ಸೋಂಕು ಹೆಚ್ಚಳಕ್ಕೆ ಕಾರಣವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ 51 ಪಾರಿವಾಳ ಮಳಿಗೆಗಳನ್ನು ಮುಚ್ಚಲಾಗಿದೆ ಎಂಬ ಮಾಹಿತಿಯನ್ನೂ ನೀಡಿದರು.
ಗೋವಾದಲ್ಲಿಯೂ ಹಲವರು ಪಾರಿವಾಳಗಳಿಗೆ ಆಹಾರ ನೀಡುತ್ತಿದ್ದು, ಇದು ವಿವಿಧ ನಗರಗಳಲ್ಲಿ ಪಾರಿವಾಳಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಆತಂಕ ಸೃಷ್ಟಿಸಿದೆ. ನಿರ್ದಿಷ್ಟ ಜಾತಿ ಮತ್ತು ಧರ್ಮದ ಕೆಲವು ಜನರು ಪ್ರತಿದಿನ ಈ ಪಾರಿವಾಳಗಳಿಗೆ ಆಹಾರ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಶಾಸಕ ವಿಜಯ್ ಸರ್ದೇಸಾಯಿ ಈ ಪದ್ಧತಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.