ಸುದ್ಧಿಕನ್ನಡ ವಾರ್ತೆ
ನವದೆಹಲಿ: ದೇಶಾದ್ಯಂತ ಮುಂಗಾರು ಚುರುಕುಗೊಂಡಿದೆ. ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಮಳೆ ಮುಂದುವರೆಯಲಿರುವ ಸಾಧ್ಯತೆಯನ್ನು ಹವಾಮಾನ ಇಲಾಖೆ ವ್ಯಕ್ತಪಡಿಸಿದೆ.

ದೇಶದ ಹಲವು ರಾಜ್ಯಗಳಲ್ಲಿ ಅಗಷ್ಟ 18 ರಂದು ಇಂದು ಭಾರಿ ಮಳೆಯಾಗಲಿಎ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ, ತೆಲಂಗಾಣ, ಓಡಿಶಾ, ಆಂಧ್ರಪ್ರದೇಶ, ಛತ್ತೀಸಗಢ, ರಾಜ್ಯಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗೋವಾ, ಮಹಾರಾಷ್ಟ್ರ, ಗುಜರಾತ್ ನಲ್ಲಿ ಅಗಷ್ಟ 18 ಮತ್ತು 19 ರಂದು ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.