ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಶ್ರೀಪತಿ ಗ್ರಾಮದಲ್ಲಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಹಳಿಯಾಳ ವಿಸ್ತರಣಾ ಶಾಖೆ ಜೋಯಿಡಾ ಮತ್ತು ಪಶುಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ ಜೋಯಿಡಾ ಇವರ ಸಹಯೋಗದೊಂದಿಗೆ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.
ತರಬೇತಿ ಕಾರ್ಯಕ್ರಮದಲ್ಲಿ ಅಶೋಕ ಸೂರ್ಯವಂಶಿ ಯೋಜನಾಧಿಕಾರಿಗಳು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಜೋಯಿಡಾ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ವತಿಯಿಂದ ಸಿಗುವ ಉಚಿತ ತರಬೇತಿಯ ಕುರಿತು ಉಪಯುಕ್ತ ಮಾಹಿತಿ ನೀಡಿದರು. ತರಬೇತಿಯಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪಶುಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ ಜೋಯಿಡಾದ ಪಶು ವೈದ್ಯರಾಗಿರುವ ಡಾ.ಮಂಜಪ್ಪರವರು ವಿವಿಧ ಜಾನುವಾರಗಳ ತಳಿಗಳ ಕುರಿತು,ಜಾನುವಾರಗಳ ರೋಗ ಲಸಿಕೆಗಳ ಕುರಿತು,ಜಾನುವಾರಗಳ ಆಹಾರಗಳ ಕುರಿತು,ಕೋಳಿ ಸಾಕಾಣಿಕೆ,ಕುರಿ ಸಾಕಾಣಿಕೆ, ಆಡು ಸಾಕಾಣಿಕೆ ಕುರಿತು ವಿವರವಾದ ಮಾಹಿತಿಯನ್ನು ತರಬೇತಿಯಲ್ಲಿ ನೀಡಿದರು.
ತರಬೇತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಮಂಜುನಾಥ ಸಾವಂತ ಸಮುದಾಯ ಸಂಘಟಕರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಜೋಯಿಡಾ ಕಾರ್ಯಕ್ರಮವನ್ನು ನಿರೂಪಿಸಿ,ವಂದಿಸಿದರು.