ಸುದ್ದಿ ಕನ್ನಡ ವಾರ್ತೆ

. ಜೋಯಿಡಾ:ಬಿಹಾರದ ರಾಜ್ ಗಿರ್ ನಲ್ಲಿ ನಡೆದ 2025ರ ಹಾಕಿ ಏಷ್ಯಾ ಕಪ್ ಫೈನಲ್ ನಲ್ಲಿ ಹರ್ಮನ್ ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4- 1ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಪಡೆದಿದ್ದಕ್ಕೆ ನಂದಿಗದ್ದೆ ಗ್ರಾಮ ಪಂಚಾಯತ ಸದಸ್ಯರಾದ ಧವಳೋ ಸಾವರ್ಕರ್ ಭಾರತದ ಹಾಕಿ ತಂಡದ ಎಲ್ಲಾ ಆಟಗಾರರಿಗೆ,ತಂಡದ ತರಬೇತಿ ತಂಡದವರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ಹಾಕಿ ತಂಡವು ನಾಲ್ಕನೇಯ ಬಾರಿಗೆ ಏಷ್ಯಾ ಕಪ್ ಸಾಧನೆ ಮಾಡಿದೆ.ವಾಸ್ತವವಾಗಿ ಸೂಪರ್ 4 ಹಂತದಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2 – 2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾ ತಂಡಕ್ಕೆ ಗೆಲ್ಲಲು ಯಾವುದೇ ಅವಕಾಶ ನೀಡದೆ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಭಾರತ ಹಾಕಿ ತಂಡವು 2026ರ ವಿಶ್ವಕಪ್ ಟೂರ್ನಿಯಲ್ಲಿ ಅರ್ಹತೆ ಪಡೆದಿದೆ.