ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ಮೊರ್ಲೆಯ ರಸ್ತೆ ಬದಿಯಲ್ಲಿಯೇ ಓಂಕಾರ ಆನೆಯು ಪುಂಡಾಟ ನಡೆಸಿದ್ದು ಸ್ಥಳೀಯ ಜನತೆಯಲ್ಲಿ ಆತಂಕದ ವಾತಾವರಣ ಮನೆಮಾಡಿದೆ. ಕಳೆದ ಏಪ್ರಿಲ್ ನಲ್ಲಿ ಇದೇ ಆನೆಯು ರೈತರೋರ್ವರ ಬಲಿ ತೆಗೆದುಕೊಂಡಿತ್ತು. ಇದೀಗ ಇದೇ ಆನೆಯು ಜನವಸತಿ ಪ್ರದೇಶಕ್ಕೆ ಬಂದು ದಾಂಧಲೆ ನಡೆಸಿದ್ದು ಆತಂಕಕ್ಕೆ ಕಾರಣವಾಗಿದೆ.
ಇದೀಗ ಈ ಓಂಕಾರ ಆನೆಯ ಓಡಾಟದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದು ಎಚ್ಚರ ವಹಿಸಿದ್ದಾರೆ. ಆದರೆ ಈ ಆನೆ ಯಾವ ಭಾಗದಲ್ಲಿ ಓಡಾಟ ನಡೆಸುತ್ತಿದೆ ಎಂದು ಅರಣ್ಯ ಇಲಾಖೆಯ ವತಿಯಿಂದ ಸ್ಥಳೀಯರಿಗೆ ಸರಿಯಾದ ಮಾಹಿತಿ ನೀಡಲಾಗುತ್ತಿಲ್ಲ ಎಂಬ ಆರೋಪ ಕೂಡ ಕೇಳಿಬರುತ್ತಿದೆ.
ಗೋವಾದ ಮೊರ್ಲೆ ಭಾಗದಲ್ಲಿ ಆನೆಯ ದಾಂಧಲೆಯಿಂದಾಗಿ ಭೀತಿಯ ವಾತಾವರಣ ಸೃಷ್ಠಿಯಾಗಿದೆ. ಜನರು ಈ ಭಾಗದಲ್ಲಿ ರಸ್ತೆಯಲ್ಲಿ ಓಡಾಟ ನಡೆಸಲು ಕೂಡ ಭಯಪಡುವಂತಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ವಹಿಸಿ ಆನೆಯಿಂದ ಯಾರಿಗೂ ತೊಂದರೆಯಾಗದಂತೆ ಎಚ್ಚರ ವಹಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಯ ಬಳಿ ಮನವಿ ಮಾಡಿದ್ದಾರೆ.